ಮರಾಠಿ ಸಾಹಿತ್ಯದಲ್ಲಿ ಆತ್ಮಕಥನವು ಅತ್ಯಂತ ಪ್ರಬಲವಾದ ಅಭಿವ್ಯಕ್ತಿಯಾಗಿದೆ. ಅಲ್ಲಿಯ ಸತ್ವಶಾಲಿ ಮತ್ತು ಬೆಂಕಿಯುಂಡೆಯಂಥ ಬರೆಹಗಳು ಅವತರಿಸಿದ್ದು ಆತ್ಮಕಥನದ ರೂಪದಲ್ಲಿಯೇ. ಅದರಲ್ಲಿಯೂ ದಲಿತ ವರ್ಗದವರು ಬರೆದಿರುವ ಆತ್ಮಕಥನಗಳು ಅದರಲ್ಲಿಯ ಹಸಿಹಸಿಯಾದ ಮತ್ತು ಅಕ್ಷರಲೋಕಕ್ಕೆ ಮುಖಾಮುಖಿಯಾದವರ ತಾಜಾತನದಿಂದಾಗಿ ಉತ್ಕೃಷ್ಟ ಸಾಹಿತ್ಯವಾಗಿಯೂ ಮನ್ನಣೆ ಗಳಿಸಿದವು. ಆ ಸಾಲಿನಲ್ಲಿ ನಿಲ್ಲುವ ಆತ್ಮಕಥನ ಪ್ರಸಿದ್ಧ ವಿಜ್ಞಾನಿ ನಾಮದೇವ ನಿಮ್ಗಾಡೆಯವರ ‘ಹುಲಿಯ ನೆರಳಿನೊಳಗೆ’. ಇದಕ್ಕೊಂದು ಉಪಶೀರ್ಷಿಕೆ ‘ಅಂಬೇಡ್ಕರ್ವಾದಿಯ ಆತ್ಮಕಥೆ’ ಎಂದು. ಇದನ್ನು ಬಿ.ಶ್ರೀಪಾದ ಅವರು ಭಾವಾನುವಾದ ಮಾಡಿದ್ದಾರೆ. ಮೂಲ ಆತ್ಮಕತೆಯನ್ನು ಓದುವಾಗ ತಮಗೆ ಮುಖ್ಯವೆನಿಸಿದ್ದು ಕನ್ನಡದ...