ಸಾವಿನೂರಿನ ದಾರಿಯ ಅಧ್ಯಾತ್ಮ ಕೆ.ಸತ್ಯನಾರಾಯಣ ಅವರ `ಕೋವಿಡ್‌ ದಿನಚರಿ’

ಈ ಶತಮಾನ ಕಂಡಿರುವ ಅತ್ಯಂತ ಭೀಕರವಾದ ಮಾನವ ದುರಂತ ಕೊರೋನಾ ವೈರಸ್ಸಿನ ಹಾವಳಿ ಮಾಡಿರುವ ಗಾಯ ಮಾಯುವುದಕ್ಕೆ ಹಲವು ವರ್ಷಗಳೇ ಬೇಕಾಗಬಹುದು. ಸಮಾಜಜೀವಿಯಾದ ಮನುಷ್ಯ ಅನಿವಾರ್ಯವಾಗಿ ತನ್ನನ್ನೇ ತಾನು ಹೇಗೆ ಒಂದೊಂದು ದ್ವೀಪವಾಗಿ ಮಾರ್ಪಡಿಸಿಕೊಳ್ಳಬೇಕಾಗಿ ಬಂತು ಎಂಬುದು ಇದೀಗ ಬದುಕಿರುವ ಎಲ್ಲರ ಅನುಭವವೂ ಆಗಿದೆ. ಈ ಕೋವಿಡ್‌ ಆಘಾತವನ್ನು ಸೃಜನಶೀಲ ಮನಸ್ಸು ಹೇಗೆ ಪರಿಭಾವಿಸಿತು ಎಂಬುದು ಒಂದು ಕುತೂಹಲ. ಹಲವರು ಹಲವು ರೀತಿಯಲ್ಲಿ ಇದಕ್ಕೆ ಬರೆಹದ ರೂಪವನ್ನು ಕೊಟ್ಟಿದ್ದಾರೆ. ಬಹುತೇಕ ಎಲ್ಲರೂ ಮೋಡ ಕರಗಿ ನೀರಾಗಿ ಸುರಿದ...