ಮನುಷ್ಯ ಬದಲಾಗಲೇಬೇಕು…

ಕತೆಯೇನೋ ಯಾವಾಗಲೂ ತನ್ನ ಪಾಡಿಗೆ ತಾನು ತನ್ನದೇ ಜಗತ್ತಿನಲ್ಲಿ ಇರುತ್ತದೆ. ಅದನ್ನು ನೋಡುವುದರಿಂದ, ಹೇಳುವವರಿಂದ, ಬರೆಯುವವರಿಂದ ಕತೆಯ ಒಂದಷ್ಟು ಭಾಗ ಮಾತ್ರ ಈ ಜಗತ್ತಿಗೆ ಬರುತ್ತದಷ್ಟೆ.. (ಒಂದು ಭೋಜನ ಮೀಮಾಂಸೆ) ಎಂಬ ನಂಬಿಕೆಯಿಂದ ಬರೆಯುತ್ತಿರುವ ಕತೆಗಾರ ಕೆ. ಸತ್ಯನಾರಾಯಣ ಅವರ `ಮನುಷ್ಯರು ಬದಲಾಗುವರೆ?’ ಕಥಾಸಂಕಲನ ಮನುಷ್ಯ ಜಗತ್ತಿನ ಹಲವು ಸೂಕ್ಷ್ಮ ಸುಳಿಹುಗಳನ್ನು ಅರ್ಥಮಾಡಿಕೊಳ್ಳುವುದಕ್ಕೆ ನೆರವಾಗುತ್ತದೆ. ಕತೆಗಾರನ ಮುಂದೆ ವಿಶಾಲವಾದ, ವಿಚಿತ್ರವಾದ ಜಗತ್ತಿದೆ. ಅವರವರ ನೋಟಕ್ಕೆ ತಕ್ಕಂತೆ ಅದು ಅವರಿಗೆ ದಕ್ಕುತ್ತದೆ. ಹಾಗೆ ದಕ್ಕಿಸಿಕೊಳ್ಳುವಾಗ ಅವರಿಗೆ ಜವಾಬ್ದಾರಿಯೂ ಇರುತ್ತದೆ....