ವಿಮರ್ಶೆ

ಗುಂಡೂಮನೆಯ ಮೂರು ಮುತ್ತು

ಜಿ.ಎಸ್‌.ಸದಾಶಿವ ಅವರು ಮೂರು ಕೃತಿಗಳು ಕನ್ನಡ ಕಾವ್ಯಲೋಕಕ್ಕೆ ಒಬ್ಬರು ಜಿಎಸ್‌ಎಸ್‌ ಇದ್ದಾರೆ. ಅದೇ ರೀತಿ ಕನ್ನಡ ಪತ್ರಿಕಾ ಲೋಕಕ್ಕೂ ಒಬ್ಬರು ಜಿಎಸ್‌ಎಸ್‌ ಇದ್ದರು. ಅವರೇ ಡೂಮನೆ ಶ್ರೀಪಾದರಾವ್‌ ಸದಾಶಿವ. ಕಾಲೇಜಿನಲ್ಲಿ ಪ್ರೊಫೆಸರ್‌ ಆಗಬೇಕು ಎಂದುಕೊಂಡಿದ್ದ ಸದಾಶಿವ ಪತ್ರಿಕಾರಂಗಕ್ಕೆ ಬಂದದ್ದು ತೀರ ಆಕಸ್ಮಿಕ. `ಸಂಯುಕ್ತ ಕರ್ನಾಟಕ'ದಲ್ಲಿ ವೃತ್ತಿ ಆರಂಭಿಸಿದ ಅವರು `ಪ್ರಜಾವಾಣಿ', `ಸುಧಾ' ಬಳಿಕ `ಕನ್ನಡಪ್ರಭ'ಕ್ಕೂ ಕಾಲಿಟ್ಟರು. ಮಹಾಮೌನಿಯಾಗಿದ್ದ ಸದಾಶಿವ ಅವರೊಳಗೊಬ್ಬ ನಗೆಗಾರ ಇದ್ದ ಎಂದರೆ ನಂಬುವುದಕ್ಕೇ ಆಗುವುದಿಲ್ಲ. ಸದಾಶಿವ ಕಥೆಗಾರರೆಂದು ಪ್ರಸಿದ್ಧರಾದವರು. ಹಾಗೆಯೇ ಮಕ್ಕಳ ಸಾಹಿತ್ಯವನ್ನೂ ಅವರು...

ಇರುವುದೆಲ್ಲವ ಬಿಟ್ಟು ಇರದುದರತ್ತ…..

ಡಾ.ನಾ. ಮೊಗಸಾಲೆಯವರ ಇದ್ದೂ ಇಲ್ಲದ್ದು ಕಾದಂಬರಿಯ ಕುರಿತು ಸಮಕಾಲೀನ ಕನ್ನಡ ಸಾಹಿತ್ಯದಲ್ಲಿ ಸಮೃದ್ಧವಾಗಿ ಕೃತಿ ರಚನೆಯಲ್ಲಿ ತೊಡಗಿರುವವರಲ್ಲಿ ಡಾ.ನಾ ಮೊಗಸಾಲೆಯವರು ಮೊದಲ ಶ್ರೇಣಿಯಲ್ಲಿ ನಿಲ್ಲುತ್ತಾರೆ. ನಾನು ಕಳೆದ ಒಂದೂವರೆ ದಶಕದಿಂದ ಡಾ.ನಾ.ಮೊಗಸಾಲೆಯವರು ರಚಿಸಿದ ಎಲ್ಲ ಕೃತಿಗಳನ್ನೂ ಬಹುತೇಕ ಓದಿದ್ದೇನೆ. ಕಾಂತಾವರದಲ್ಲಿ ಕುಳಿತು ಕನ್ನಡ ಕಟ್ಟುವ ಕೆಲಸವನ್ನು ಅವರು ಬಹಳ ಶ್ರದ್ಧೆಯಿಂದ ಮಾಡುತ್ತ ಬಂದಿದ್ದಾರೆ. ಈ ಅವಧಿಯಲ್ಲಿ ಅವರ ಪರಿಸರದಲ್ಲಿ ಬಹಳಷ್ಟು ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ, ಆರ್ಥಿಕ ಸ್ಥಿತ್ಯಂತರಗಳು ನಡೆದಿವೆ. ಇವುಗಳಲ್ಲಿ ಮೊಗಸಾಲೆಯವರು ಬಹಿರಂಗದಲ್ಲಿ ಯಾವುದೇ ಚಳವಳಿಯಲ್ಲಿ ಕಾಣಿಸಿಕೊಂಡು...

ಮನುಷ್ಯ ಬದಲಾಗಲೇಬೇಕು…

ಕತೆಯೇನೋ ಯಾವಾಗಲೂ ತನ್ನ ಪಾಡಿಗೆ ತಾನು ತನ್ನದೇ ಜಗತ್ತಿನಲ್ಲಿ ಇರುತ್ತದೆ. ಅದನ್ನು ನೋಡುವುದರಿಂದ, ಹೇಳುವವರಿಂದ, ಬರೆಯುವವರಿಂದ ಕತೆಯ ಒಂದಷ್ಟು ಭಾಗ ಮಾತ್ರ ಈ ಜಗತ್ತಿಗೆ ಬರುತ್ತದಷ್ಟೆ.. (ಒಂದು ಭೋಜನ ಮೀಮಾಂಸೆ) ಎಂಬ ನಂಬಿಕೆಯಿಂದ ಬರೆಯುತ್ತಿರುವ ಕತೆಗಾರ ಕೆ. ಸತ್ಯನಾರಾಯಣ ಅವರ `ಮನುಷ್ಯರು ಬದಲಾಗುವರೆ?’ ಕಥಾಸಂಕಲನ ಮನುಷ್ಯ ಜಗತ್ತಿನ ಹಲವು ಸೂಕ್ಷ್ಮ ಸುಳಿಹುಗಳನ್ನು ಅರ್ಥಮಾಡಿಕೊಳ್ಳುವುದಕ್ಕೆ ನೆರವಾಗುತ್ತದೆ. ಕತೆಗಾರನ ಮುಂದೆ ವಿಶಾಲವಾದ, ವಿಚಿತ್ರವಾದ ಜಗತ್ತಿದೆ. ಅವರವರ ನೋಟಕ್ಕೆ ತಕ್ಕಂತೆ ಅದು ಅವರಿಗೆ ದಕ್ಕುತ್ತದೆ. ಹಾಗೆ ದಕ್ಕಿಸಿಕೊಳ್ಳುವಾಗ ಅವರಿಗೆ ಜವಾಬ್ದಾರಿಯೂ ಇರುತ್ತದೆ....

ಮರುಳ ಮುನಿಯನ ಕಗ್ಗ ಒಂದು ದರ್ಶನ ಕಾವ್ಯ

ಮಂಕು ತಿಮ್ಮನ ಕಗ್ಗಕ್ಕಿಂತ ಒಂದು ಮೆಟ್ಟಿಲು ಮೇಲಿನ ವೈಚಾರಿಕತೆ ಇದರಲ್ಲಿದೆ (ನಾನು ಮರುಳ ಮುನಿಯನ ಕಗ್ಗವನ್ನು ಓದಿದ್ದು ಕರ್ನಾಟಕ ವಿಶ್ವವಿದ್ಯಾಲಯದ ಗ್ರಂಥಾಲಯದಲ್ಲಿ 1984ರಲ್ಲಿ. ಪಠ್ಯಕ್ರಮದ ಭಾಗವಾಗಿ ಬರೆದ ವಿಮರ್ಶೆ ಇದು. ಸುಮಾರು 38 ವರ್ಷಗಳ ಹಿಂದೆ.) ಅಕಸ್ಮಾತ್ತಾಗಿ ಡಿವಿಜಿ ಕನ್ನಡಿಗರ ನೆನಪಿನಿಂದ ಮರೆಯಾದರೂ ಅವರ ಮಂಕುತಿಮ್ಮ ಮಾತ್ರ ಮರೆಯಾಗಲಾರ. ಡಿವಿಜಿ ಇಂದು ಭೌತಿಕವಾಗಿ ನಮ್ಮೊಂದಿಗೆ ಇಲ್ಲ. ಅವರು ಟ್ಟುಹೋದ ಸಾಹಿತ್ಯ ರಾಶಿ ಮಾತ್ರ ಇದೆ. ಅವರು ನಿಧನರಾಗಿ ಒಂಬತ್ತು ವರ್ಷಗಳ ನಂತರ (1984) ಅವರದೇ ಆದ ಕೃತಿಯೊಂದು...

ಸಾವಿನೂರಿನ ದಾರಿಯ ಅಧ್ಯಾತ್ಮ ಕೆ.ಸತ್ಯನಾರಾಯಣ ಅವರ `ಕೋವಿಡ್‌ ದಿನಚರಿ’

ಈ ಶತಮಾನ ಕಂಡಿರುವ ಅತ್ಯಂತ ಭೀಕರವಾದ ಮಾನವ ದುರಂತ ಕೊರೋನಾ ವೈರಸ್ಸಿನ ಹಾವಳಿ ಮಾಡಿರುವ ಗಾಯ ಮಾಯುವುದಕ್ಕೆ ಹಲವು ವರ್ಷಗಳೇ ಬೇಕಾಗಬಹುದು. ಸಮಾಜಜೀವಿಯಾದ ಮನುಷ್ಯ ಅನಿವಾರ್ಯವಾಗಿ ತನ್ನನ್ನೇ ತಾನು ಹೇಗೆ ಒಂದೊಂದು ದ್ವೀಪವಾಗಿ ಮಾರ್ಪಡಿಸಿಕೊಳ್ಳಬೇಕಾಗಿ ಬಂತು ಎಂಬುದು ಇದೀಗ ಬದುಕಿರುವ ಎಲ್ಲರ ಅನುಭವವೂ ಆಗಿದೆ. ಈ ಕೋವಿಡ್‌ ಆಘಾತವನ್ನು ಸೃಜನಶೀಲ ಮನಸ್ಸು ಹೇಗೆ ಪರಿಭಾವಿಸಿತು ಎಂಬುದು ಒಂದು ಕುತೂಹಲ. ಹಲವರು ಹಲವು ರೀತಿಯಲ್ಲಿ ಇದಕ್ಕೆ ಬರೆಹದ ರೂಪವನ್ನು ಕೊಟ್ಟಿದ್ದಾರೆ. ಬಹುತೇಕ ಎಲ್ಲರೂ ಮೋಡ ಕರಗಿ ನೀರಾಗಿ ಸುರಿದ...

ಆತ್ಮಚರಿತ್ರೆಯ ಮೀಮಾಂಸೆ- ಅವರವರ ಭವಕ್ಕೆ ಓದುಗರ ಭಕುತಿಗೆ

ಕನ್ನಡದ ಹಿರಿಯ ಸಾಹಿತಿಗಳಲ್ಲಿ ಒಬ್ಬರಾದ ಕೆ.ಸತ್ಯನಾರಾಯಯಣ ಅವರು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೃತಿಗಳನ್ನು ರಚಿಸಿದವರು. ಸೃಜನ ಶಕ್ತಿಯ ಜೊತೆಯಲ್ಲಿ ವಿಮರ್ಶನ ಶಕ್ತಿಯನ್ನೂ ಮೇಳೈಸಿಕೊಂಡವರು. ಅವರ ಹೊಸ ಕೃತಿ `ಅವರವರ ಭವಕ್ಕೆ ಓದುಗರ ಭಕುತಿಗೆ' ಅವರ ಸೃಷ್ಟಿಕ್ರಿಯೆಯ ಹೊಸ ಸಾಮರ್ಥ್ಯದ ಕಡೆಗೆ ಬೆರಳು ತೋರಿಸುತ್ತದೆ. ಈ ಕೃತಿಯಲ್ಲಿ ಅವರು ಕನ್ನಡದ ಏಳು ಜನ ಹೆಸರಾಂತ ಸಾಹಿತಿಗಳು ರಚಿಸಿರುವ ಆತ್ಮಚರಿತ್ರೆಗಳನ್ನು ಪರಿಶೀಲನೆಗೆ ಎತ್ತಿಕೊಂಡಿದ್ದಾರೆ. ಅದರ ಮೂಲಕ ಅವರು ಆತ್ಮಚರಿತ್ರೆ ಪ್ರಕಾರಕ್ಕೆ ಒಂದು ವ್ಯಾಖ್ಯೆಯನ್ನು ನೀಡುವ ಪ್ರಯತ್ನ ಮಾಡಿರುವುದನ್ನು ಗಮನಿಸಬಹುದು. ಈ...

ಗುರುತ್ವವನ್ನು ಅಡಗಿಸಿಕೊಂಡಿರುವ ಲಘು ಬರೆಹಗಳು

ಕೆ.ಸತ್ಯನಾರಾಯಣ ಅವರ ಕಪಾಳಮೋಕ್ಷ ಪ್ರವೀಣ ತಮ್ಮ ನಿರಂತರ ಬರೆಹಗಳಿಂದ ಕನ್ನಡ ಸಾಹಿತ್ಯದ ವಿವಿಧ ಪ್ರಕಾರಗಳನ್ನು ಶ್ರೀಮಂತಗೊಳಿಸುತ್ತಿರುವ ಕೆ.ಸತ್ಯನಾರಾಯಣ ಅವರು ಇದೀಗ ಕಪಾಳಮೋಕ್ಷ ಪ್ರವೀಣ' ಎಂಬ ನೂತನ ಕೃತಿಯಲ್ಲಿ ಕೆಲವು ಸ್ವಭಾವ ಚಿತ್ರಗಳನ್ನು ನೀಡಿದ್ದಾರೆ. ತಮ್ಮ ಈ ಬರೆಹಗಳ ಹೊಳಹು ಹೊಳೆದದ್ದು ಡಿವಿಜಿಯವರಜ್ಞಾಪಕ ಚಿತ್ರಶಾಲೆ’ ಎಂಬ ಕೃತಿಯಿಂದ ಎಂದು ಲೇಖಕರು ಹೇಳಿಕೊಂಡಿದ್ದಾರೆ. ಹಾಗೆಯೇ ಜಾರ್ಜ್‌ ಆರ್ವೆಲ್ಲರ ಬರೆಹಗಳೂ ಅವರ ಮೇಲೆ ಪ್ರಭಾವ ಬೀರಿರಬಹುದು. ತುದಿವಾದಿಗಳು' ಬರೆಹದಲ್ಲಿ ಅವರು ಆರ್ವೆಲ್‌ರ,ಒಬ್ಬ ಮನುಷ್ಯ ನಮಗೆ ವೈಯಕ್ತಿಕ ಸ್ತರದಲ್ಲಿ ಪರಿಚಯವಾದಮೇಲೆ, ಆತ್ಮೀಯತೆ ಮೂಡಿದ...

ಸ್ವಾತಂತ್ರ್ಯದ ಭ್ರಮನಿರಸನದ ಕತೆ ಹೇಳುವ `ಕೊನ್ನಾರ ಕಿಂಕಿಣಿ’

ಕನ್ನಡದ ಜನಪ್ರಿಯ ಕಾದಂಬರಿಕಾರರಲ್ಲಿ ಒಬ್ಬರಾದ ಕೃಷ್ಣಮೂರ್ತಿ ಪುರಾಣಿಕರ ಕೊನ್ನಾರ ಕಿಂಕಿಣಿ' ಕಾದಂಬರಿಯು ಅವರ ಬರೆವಣಿಗೆಯ ಆರಂಭದ ದಿನಗಳಲ್ಲಿ ರಚನೆಗೊಂಡಿದ್ದು. ಇದು ಪ್ರಕಟವಾದದ್ದು 1961ರ ಆಗಸ್ಟ್‌ ತಿಂಗಳಿನಲ್ಲಿ. ಸರಿಸುಮಾರು ಅರವತ್ತು ವರ್ಷಗಳ ನಂತರ ಈ ಕಾದಂಬರಿಯ ಮರು ಅವಲೋಕನ ಮಾಡುವಾಗ ಕೆಲವು ಹೊಳಹುಗಳು ನಮಗೆ ಇರಬೇಕಾಗುತ್ತದೆ. ಸ್ವಾತಂತ್ರ್ಯ ಪೂರ್ವದಲ್ಲಿಯೇ ಕನ್ನಡ ನವೋದಯ ಮತ್ತು ಪ್ರಗತಿಶೀಲ ಲೇಖಕರು ಕಾದಂಬರಿ ಪ್ರಕಾರಕ್ಕೆ ಒಂದು ಗಟ್ಟಿಯಾದ ಪರಂಪರೆಯನ್ನು ಹಾಕಿಕೊಟ್ಟಿದ್ದರು. ಐತಿಹಾಸಿಕ ಕಾದಂಬರಿಗಳು, ಸಾಮಾಜಿಕ ಕಾದಂಬರಿಗಳು, ಅನ್ಯಭಾಷೆಯಿಂದ ಅನುವಾದಗೊಂಡ ಕಾದಂಬರಿಗಳು ಎಲ್ಲವೂ ಹುಲುಸಾಗಿ ಎಂಬಂತೆ...

ಮಾಸ್ತಿ ಕಥಾಲೋಕಕ್ಕೆ ಹೊಸ ಬೆಳಕಿಂಡಿ

ಕೆ.ಸತ್ಯನಾರಾಯಣ ಅವರ- ಮಹಾ ಕಥನದ ಮಾಸ್ತಿ ಕನ್ನಡದ ಪ್ರಮುಖ ಗದ್ಯ ಬರೆಹಗಾರರಲ್ಲಿ ಒಬ್ಬರಾಗಿರುವ ಕೆ.ಸತ್ಯನಾರಾಯಣ ಅವರು ಸುಮಾರು ನಾಲ್ಕು ದಶಕಗಳಿಂದ ಕನ್ನಡದ ಆಸ್ತಿ ಎಂದು ಹೆಸರಾಗಿರುವ ಮಾಸ್ತಿ ವೆಂಕಟೇಶ ಅಯ್ಯಂಗಾರ ಅವರನ್ನು ಓದುತ್ತ, ಅವರ ಪ್ರಭಾವಕ್ಕೆ ಒಳಗಾಗುತ್ತ, ಆ ಪ್ರಭಾವವನ್ನು ಮೀರಿ ಬೆಳೆಯಲು ಪ್ರಯತ್ನಿಸುತ್ತ, ತಮ್ಮದೇ ಒಂದು ಕಥನ ಶೈಲಿಯನ್ನು ರೂಢಿಸಿಕೊಂಡವರು. ಮಾಸ್ತಿಯವರ ಪ್ರಥಮ ಕಥಾ ಸಂಕಲನ ಪ್ರಕಟವಾಗಿ ನೂರು ವರ್ಷಗಳು ಆಗುತ್ತಿರುವ ಸಂದರ್ಭದಲ್ಲಿ ಮಾಸ್ತಿಯವರ ಕತೆಗಳನ್ನು ಸುದೀರ್ಘವಾಗಿ ಅಧ್ಯಯನ ಮಾಡಿ `ಮಹಾ ಕಥನದ ಮಾಸ್ತಿ’ ಎಂಬ...